CrimeNational

ಕುಸಿದುಬಿದ್ದ ನಾಲ್ಕಂತಸ್ತಿನ ಕಟ್ಟಡ; ಇಬ್ಬರ ದಾರುಣ ಸಾವು

ಮುಂಬೈ; ಮುಂಬೈನ ಕುರ್ಲಾ ಪ್ರದೇಶದಲ್ಲಿ ನಾಲ್ಕಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ಕುಸಿದುಬಿದ್ದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದ್ದು, ಇದರಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಾಯಕ್ ನಗರ ಸೊಸೈಟಿಯಲ್ಲಿರುವ ಕಟ್ಟಡದ ಒಂದು ಭಾಗ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಿದರು.  ಗಾಯಾಳುಗಳಿಗೆ ರಾಜವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಅವಶೇಷಗಳಡಿ ಇನ್ನೂ 20-25 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post