National

ಅಚ್ಚರಿ ಬದಲಾವಣೆ; ಏಕನಾಥ್ ಶಿಂಧೆ ಸಿಎಂ

ಮುಂಬೈ: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್​ ಘೋಷಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ, ಅಚ್ಚರಿಯ ವಿಚಾರ ಪ್ರಕಟಿಸಿದರು.

ಇಂದು ರಾತ್ರಿ 7:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿಯಾಗಿ ಏಕನಾಥ್​ ಶಿಂಧೆ ಪ್ರಮಾಣ ವಚನ ಸ್ವೀಕರಿಸುವರು ಎಂದು ಅವರು ತಿಳಿಸಿದರು.

Share Post