ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ; ಇಂದು ಸಂಜೆ ಮೋದಿ ನೇತೃತ್ವದಲ್ಲಿ ಸಭೆ
ನವದೆಹಲಿ; ಮಧ್ಯಪ್ರದೇಶ, ಛತ್ತಿಸ್‌ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ನಡೆಸಿವೆ. ಬಿಜೆಪಿ ಪಕ್ಷ ಕೂಡಾ ಈ ಬಗ್ಗೆ ಗಂಭೀರ ಚಿಂತನೆಗೆ ಮುಂದಾಗಿದೆ. ಇದಕ್ಕಾಗಿ ಇಂದು ದೆಹಲಿಯ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಬಿಜೆಪಿಯ ಎಲ್ಲಾ ಸಿಇಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಪ್ರಚಾರ, ಅಭ್ಯರ್ಥಿಗಳ ಆಯ್ಕೆ, ರಾಜ್ಯಗಳಲ್ಲಿನ ರಾಜಕೀಯ ಪರಿಸ್ಥಿತಿ, ಚುನಾವಣಾ ತಂತ್ರಗಾರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.