National

ಚೀನಾದಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು

ಚೀನಾ : ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. 5.3 ತೀವ್ರತೆಯ ಭೂಕಂಪನ ಉಂಟಾಗಿರುವ ಬಗ್ಗೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ ಎಂದು ಚೀನಾದ ಭೂಕಂಪ ಅಧ್ಯಯನ ಕೇಂದ್ರ ಅಧಿಕಾರಿಗಳು ತಿಳಿಸಿದ್ದಾರೆ.ವಾಯವ್ಯ ಚೀನಾದ ಕಿಂಗ್ಹೈ ಪ್ರಾಂತ್ಯದ ಮಂಗ್ಯಾ ನಗರದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಗ್ಗೆ 7:54 ಕ್ಕೆ ಭೂಮಿ ಕಂಪಿಸಿದೆ.ಕಂಪನದಿಂದಾಗಿ ಈವರೆಗೆ ಯಾವುದೇ ಸಾವು-ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

 

Share Post