CinemaNational

ಆರ್‌ಎಸ್‌ಎಸ್‌ ಬಗ್ಗೆ ಸಿನಿಮಾ, ವೆಬ್‌ ಸೀರೀಸ್‌ ಮಾಡ್ತಾರಂತೆ ರಾಜಮೌಳಿ ತಂದೆ..!

ಹೈದರಾಬಾದ್‌;  ಬಾಹುಬಲಿ ಖ್ಯಾತಿಯ ಎಸ್.ಎಸ್. ರಾಜಮೌಳಿ ಅವರ ತಂದೆ, ರಾಜ್ಯ ಸಭಾ ಸಂಸದ  ವಿಜಯೇಂದ್ರ ಪ್ರಸಾದ್ ಅವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಕುರಿತಾಗಿ ಸಿನಿಮಾ ಮತ್ತು ವೆಬ್ ಸೀರಿಸ್ ಮಾಡ್ತಾರಂತೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಇಡೀ ಕಥೆಯನ್ನು ಮೋಹನ್ ಭಾಗವಾತ್ ಮೆಚ್ಚಿಕೊಂಡಿದ್ದು, ಇದೊಂದು ಅಪರೂಪದ ಸಿನಿಮಾ ಆಗಲಿದೆ ವಿಜಯೇಂದ್ರ ಪ್ರಸಾದ್‌ ಅವರು ಹೇಳಿದ್ದಾರೆ.

ವಿಜಯೇಂದ್ರ ಪ್ರಸಾದ್‌ ಅವರು ಖ್ಯಾತ ಸಿನಿಮಾ ಕತೆಗಾರರಾಗಿದ್ದಾರೆ. ಬಾಹುಬಲಿ ಸೇರಿದಂತೆ ರಾಜಮೌಳಿ ನಿರ್ದೇಶನದ ಬಹುತೇಕ ಸಿನಿಮಾಗಳಿಗೆ ಇವರೇ ಕತೆ ಬರೆದಿದ್ದಾರೆ. ವಿಜಯವಾಡದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ ಪ್ರಸಾದ್ ಅವರು, ಆರ್.ಎಸ್.ಎಸ್ ಕುರಿತು ಸಿನಿಮಾ ಮತ್ತು ವೆಬ್ ಸೀರಿಸ್ ತಯಾರಾಗಲಿದ್ದು, ಎರಡಕ್ಕೂ ನಾನೇ ನಿರ್ದೇಶನ ಮಾಡಲಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಬರೆಯುವುದಕ್ಕೆ ಆರಂಭಿಸಿರುವುದಾಗಿಯೇ ತಿಳಿಸಿದ್ದಾರೆ. ಆರ್.ಎಸ್.ಎಸ್ ಬಗ್ಗೆ ಊಹಾಪೋಹಗಳನ್ನು ಹರಿಬಿಡಲಾಗಿದೆ. ಗಾಂಧೀಜಿಯನ್ನು ಕೊಂದವರು ಆರ್.ಎಸ್.ಎಸ್ ನವರು ಎಂದು ಬಿಂಬಿಸಲಾಗುತ್ತಿದೆ. ಅದೆಲ್ಲದಕ್ಕೂ ಸಿನಿಮಾದಲ್ಲಿ ಉತ್ತರ ಕೊಡುತ್ತೇನೆ ಎಂದಿದ್ದಾರೆ.

Share Post