ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ; ಮಹತ್ವದ ದಾಖಲೆಗಳು ಸುಟ್ಟು ಭಸ್ಮ
ವಿಜಯವಾಡ: ಇಲ್ಲಿನ ಜಿಲ್ಲಾ ಕೋರ್ಟ್ ಸಂಕೀರ್ಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವು ಕೋರ್ಟ್ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ 2ನೇ ಹೆಚ್ಚುವರಿ ಜೂನಿಯರ್ ಸಿವಿಲ್ ನ್ಯಾಯಾಲಯ ಮತ್ತು ಆರ್‌ಸಿಸಿ ನ್ಯಾಯಾಲಯಗಳಿರುವ ಬೀಸೆಂಟ್ ರಸ್ತೆ ನ್ಯಾಯಾಲಯದ ಸಂಕೀರ್ಣದ 2ನೇ ಮಹಡಿಯಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸಲಾಗಿದೆ. ಪಿಒಪಿ ಸೀಲಿಂಗ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎರಡನೇ ಮಹಡಿಯಲ್ಲಿ ಬೆಂಕಿ ಹರಡಿತ್ತು. ಘಟನೆಯಲ್ಲಿ ಸಿವಿಲ್ ನ್ಯಾಯಾಲಯಗಳ ಕೆಲವು ದಾಖಲೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಆದ್ರೆ ಯಾವುದೇ ಪ್ರಣಾಪಾಯವಾದ ಬಗ್ಗೆ ವರದಿಯಾಗಿಲ್ಲ.