National

ಉನಾವ್‌ನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಆರು ಮಂದಿ ದುರ್ಮರಣ

ಹಿಮಾಚಲ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ತಹ್ಲಿವಾಲ್‌ನಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದೆ. ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹತ್ತು ಮಂದಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಉನಾವ್‌ ಆಸ್ಪತ್ರೆಗೆ ಸೇರಿಸಲಾಗಿದೆ.

ಪಟಾಕಿ ತಯಾರಿ ವೇಳೆ ಹಠಾತ್‌ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೂ ಬೆಂಕಿ ತಗುಲಿದೆ. ಆರು ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮೃತರು ಗುರುತಿಸಲಾಗದಷ್ಟು ಸುಟ್ಟುಹೋಗಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳೀಯರು ನೆರವಿಗೆ ಬಂದಿದ್ದಾರೆ. ಈ ಹಿನ್ನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share Post