CrimeHealthNational

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ!

ಬೆಂಗಳೂರು; ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಇಂದು ಸಂಜೆ 6 ಗಂಟೆಗೆ ವಿಮಾನ ದೆಹಲಿಯಿಂದ ಬೆಂಗಳೂರಿಗೆ ಬರಲು ವಿಮಾನ ಟೇಕಾಫ್ ಆಗುತ್ತಿತ್ತು.. ಈ ವೇಳೆ ವಿಮಾನದ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಕೂಡಲೇ ವಿಮಾನ ಲ್ಯಾಂಡ್ ಮಾಡಲಾಗಿದೆ..

  ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು. ವಿಮಾನ ಸಿಬ್ಬಂದಿ ಸ್ವಲ್ಪ ಯಾಮಾರಿದ್ದರೂ ದೊಡ್ಡ ದುರಂತ ನಡೆಯುವ ಅಪಾಯವಿತ್ತು.. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಎಲ್ಲರೂ ಸೇಫ್ ಆಗಿದ್ದಾರೆ..

 

Share Post