ಭದ್ರತಾ ಪಡೆಯಿಂದ ಗುಂಡಿನ ದಾಳಿ; ನಾಗಾಲ್ಯಾಂಡ್‌ನಲ್ಲಿ 13 ಮಂದಿ ಬಲಿ
ಮೋನ್(ನಾಗಾಲ್ಯಾಂಡ್): ಭದ್ರತಾ ಪಡೆ ಸಿಬ್ಬಂದಿ ನಾಗಾಲ್ಯಾಂಡ್ ಬಂಡುಕೋರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 13 ನಾಗರಿಕರು ಮೃತಪಟ್ಟಿದ್ದಾರೆ. ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ಆಟಿಂಗ್‌ನಲ್ಲಿ ಈ ಘಟನೆ ನಡೆದಿದೆ. ಟ್ರಕ್‌ನಲ್ಲಿ ಬಂಡುಕೋರರು ಹೋಗುತ್ತಿದ್ದಾರೆಂದು ತಿಳಿದ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನು ಪ್ರತಿಭಟನೆ ಸ್ಥಳೀಯರು ಭದ್ರತಾ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಭದ್ರತಾ ಸಿಬ್ಬಂದಿ ಸಾರ್ವಜನಿಕರ ಮೇಲೂ ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ.
ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ಆಟಿಂಗ್‌ನಲ್ಲಿ ನಡೆದಿರುವ ಘಟನೆ ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿಯು ಘಟನೆ ಬಗ್ಗೆ ವಿವರವಾಗಿ ತನಿಖೆ ನಡೆಸಲಿದ್ದು, ನ್ಯಾಯ ಒದಗಿಸಿಕೊಡಲಿದೆ ಎಂದು ಉಲ್ಲೇಖಿಸಿದ್ದಾರೆ.