National

ಪಂಚ ರಾಜ್ಯಗಳ ಚುನಾವಣೆ; ಯಾವ ರಾಜ್ಯದಲ್ಲಿ ಯಾರಿಗೆ ಹೆಚ್ಚು ಸೀಟು..?

ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕಿಯೆ ಭರದಿಂದ ಸಾಗುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳಂತೆಯೇ ಫಲಿತಾಂಶ ಬರುವ ಲಕ್ಷಣ ಕಾಣುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಳ ಬಹುಮತ ಪಡೆಯುವ ಸಾಧ್ಯತೆ ಕಾಣುತ್ತಿದೆ. ಈಗಾಗಲೇ ಬಿಜೆಪಿ ನೂರ ಹತ್ತಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಪಂಜಾಬ್‌ನಲ್ಲಿ ಎಎಪಿ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ  ಹೆಚ್ಚಿದೆ. ಪಂಜಾಬ್‌ನಲ್ಲಿ ಎಎಪಿ ಪಕ್ಷ ೪೦ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ೨೦ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಉತ್ತರಾಖಂಡ ಹಾಗೂ ಗೋವಾದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಸಮಬಲದ ಹೋರಾಟ ನಡೆಸುತ್ತಿವೆ. ಎರಡೂ ರಾಜ್ಯಗಳಲ್ಲಿ ಫಲಿತಾಂಶ ಅತಂತ್ರವಾಗುವ ಸಾಧ್ಯತೆ ಇದೆ.

ಇನ್ನು ಮಣಿಪುರದಲ್ಲೂ ಬಿಜೆಪಿ-ಕಾಂಗ್ರೆಸ್‌ ನಡುವೆ ಸಮಬಲದ ಪೈಪೋಟಿ ಇದೆ. ಹೀಗಾಗಿ ಮೂರು ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯುತ್ತೆ ಎಂದು ಹೇಳುವುದು ಕಷ್ಟ. ಆದ್ರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಹಾಗೂ ಪಂಜಾಬ್‌ನಲ್ಲಿ ಎಎಪಿ ಪಕ್ಷ ಅಧಿಕಾರ ಹಿಡಿಯುವುದು ಬಹತೇಕ ಖಚಿತವಾಗಿದೆ.

Share Post