National

ಸರ್ಕಾರಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ; ಐದು ಮಂದಿ ಸ್ಥಳದಲ್ಲೇ ದುರ್ಮರಣ

ಕಾಮರೆಡ್ಡಿ: ಆಂಧ್ರಪ್ರದೇಶದ ಕಾಮರೆಡ್ಡಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಾನ್‌ಪುರ ಎಂಬಲ್ಲಿ ಆಂಧ್ರ ಸರ್ಕಾರಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದಾರುಣ ಸಾವನ್ನಪ್ಪಿದ್ದಾರೆ. ಬಾಲಕಿಯೊಬ್ಬರು ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

   ಕರೀಂನಗರ-1 ಡಿಪೋ ಬಸ್ ಸಿರಿಸಿಲ್ಲದಿಂದ ಕಾಮರೆಡ್ಡಿಗೆ ಬರುತ್ತಿತ್ತು. ಈ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್‌ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪೊಲೀಸರು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಬಾಲಕ ಸೇರಿದ್ದಾರೆ. ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Share Post