NationalPolitics

ಸೆಪ್ಟೆಂಬರ್‌ 19ಕ್ಕೆ ಅಮರೀಂದರ್‌ ಪಕ್ಷ ಬಿಜೆಪಿಯಲ್ಲಿ ವಿಲೀನ

ಚಂಡೀಗಢ; ಕಳೆದ ಪಂಜಾಬ್‌ ವಿಧಾನಸಭೆ ಚುನಾವಣೆ ವೇಳೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಟ್ಟಿದ್ದ ಪಂಜಾಬ್‌ ಲೋಕ ಕಾಂಗ್ರೆಸ್‌ (ಪಿಎಲ್‌ಸಿ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ.  ಸೆಪ್ಟೆಂಬರ್ 19 ರಂದು ವಿಲೀನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಅಮರೀಂದರ್‌ ಅವರು ದೆಹಲಿಗೆ ಭೇಟಿ ನೀಡಿ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು. ಅಂದೇ ಪಕ್ಷ ವಿಲೀನಕ್ಕೆ ದಿನಾಂಕ ಫಿಕ್ಸ್‌ ಆಗಿದೆ ಎಂದು ತಿಳಿದುಬಂದಿದೆ.

   ದೆಹಲಿಗೆ ಭೇಟಿ ನೀಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಪಕ್ಷ ವಿಲೀನಕ್ಕೆ ಇದೇ ಸಂದರ್ಭದಲ್ಲಿ ಒಪ್ಪಿಗೆ ಸಿಕ್ಕಿದೆ. ಸೆಪ್ಟೆಂಬರ್‌ 19ರಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಬಿಜೆಪಿ ಸದಸ್ಯತ್ವ ಪಡೆಯಲಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಜೊತೆಗೆ ಪಂಜಾಬ್‌ನ ಆರರಿಂದ ಏಳು ಮಾಜಿ ಶಾಸಕರು, ಅವರ ಪುತ್ರ ರಣಿಂದರ್ ಸಿಂಗ್, ಪುತ್ರಿ ಜೈ ಇಂದರ್ ಕೌರ್, ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರಲಿದ್ದಾರೆ.

Share Post