National

ಜಿ-20 ಶೃಂಗಸಭೆ ಮುಕ್ತಾಯ; ಬ್ರೆಜಿಲ್ ಗೆ ಹಸ್ತಾಂತರ

ನವದೆಹಲಿ; ದೆಹಲಿಯಲ್ಲಿ  ನಡೆಯುತ್ತಿದ್ದ ಜಿ-20 ಶೃಂಗಸಭೆ ಮುಕ್ತಾಯವಾಗಿದೆ. ಮುಂದಿನ‌ ಶೃಂಗಸಭೆ ಬ್ರೆಜಿಲ್‌ನಲ್ಲಿ ನಡೆಯಲಿದೆ.

   ಪ್ರಧಾನಿ ನರೇಂದ್ರ ಮೋದಿಯವರು ಜಿ-20 ಶೃಂಗಸಭೆಯ ಜವಾಬ್ದಾರಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ದೆಹಲಿಯಲ್ಲಿ ನಡೆದ ಶೃಂಗಸಭೆ ಮುಕ್ತಾಯವಾಗಿದೆ.

  ‘ನಾನು ಬ್ರೆಜಿಲ್ ಅಧ್ಯಕ್ಷ ಮತ್ತು ನನ್ನ ಸ್ನೇಹಿತ ಲುಲಾ ಡಾ ಸಿಲ್ವಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಅವರಿಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಲು ಬಯಸುತ್ತೇನೆ’ ಎಂದು ಮೋದಿ ಹೇಳಿದ್ದಾರೆ.

 

Share Post