ನಾಳೆಯಿಂದ ದೆಹಲಿಯಲ್ಲಿ ಜಿ-20 ಶೃಂಗಸಭೆ; ಅತಿಥಿಗಳಿಗೆ ವಿಶೇಷ ಭದ್ರತೆ
ನವದೆಹಲಿ; ನಾಳೆಯಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ ಜಿ-೨೦ ನಾಯಕರ ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ 30ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಸೇರಿದಂತೆ ಹಲವು ವಿಶೇಷ ಆಹ್ವಾನಿತರು ಭಾಗವಹಿಸುತ್ತಿದ್ದಾರೆ. ಇವರಿಗೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅದ್ದೂರಿ ಸ್ವಾಗತಕ್ಕೆ ವ್ಯವಸ್ಥೆ ಮಾಡಲಾಗಿದೆ.
ಜಿ-೨೦ ಶೃಂಗಸಭೆ ಹಿನ್ನೆಲೆಯಲ್ಲಿ ದೆಹಲಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಾಟು ಮಾಡಲಾಗಿದೆ. ಇದಕ್ಕಾಗಿ ಪೊಲೀಸ್ ಇಲಾಖೆ ಸಿಬ್ಬಂದಿ, ಅರೆಸೇನಾ ಪಡೆಗಳು ಹಾಗೂ ಇತರೆ ಏಜೆನ್ಸಿ ಭದ್ರತಾ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ. ಸುಮಾರು 50 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ದೆಹಲಿಯಲ್ಲಿ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ.
ದೆಹಲಿಯ ವಿಮಾನ ನಿಲ್ದಾಣದಿಂದ ಹೋಟೆಲ್‍ಗಳಿಗೆ ಹಾಗೂ ಹೋಟೆಲ್‍ಗಳಿಂದ ಜಿ-20 ಶೃಂಗಸಭೆ ನಡೆಯುವ ಸ್ಥಳಕ್ಕೆ ಗಣ್ಯರನ್ನು ದೆಹಲಿ ಪೊಲೀಸರು ಫೂಲ್‍ಪ್ರೂಫ್ ಭದ್ರತೆಯೊಂದಿಗೆ ಕರೆತರಲಾಗುತ್ತದೆ.