National

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾ: ಮಾರುಕಟ್ಟೆಗೆ ಬಿಡುವ ನೆಪದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ದಾರುಣ ಕೃತ್ಯ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ.

ನಂತರ ದಾರಿಯಲ್ಲಿ ಆಟೋದಲ್ಲಿ ಇನ್ನೊಬ್ಬ ವ್ಯಕ್ತಿ ಹತ್ತಿದ್ದಾನೆ. ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಮಾರುಕಟ್ಟೆಗೆ ಕರೆತರುವ ಬದಲು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಈ ಇಬ್ಬರೂ ಬಾಲಕಿಯ ಮೇಲೆ  ಅತ್ಯಾಚಾರವೆಸಗಿದ್ದಾರೆ ಎಂದು ಗೊತ್ತಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Share Post