ಗೋವಾದಲ್ಲಿ ಕಾಂಗ್ರೆಸ್ ಮುನ್ನಡೆ; ಅಭ್ಯರ್ಥಿಗಳು ರೆಸಾರ್ಟ್‌ನಲ್ಲಿ ಬಂಧಿ
ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮುನ್ಸೂಚನೆ ಇದೆ. ಆದ್ರೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಅತಂತ್ರ ಸ್ಥಿತಿ ಬರುತ್ತದೆ ಎಂಬ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ನಲವತ್ತೂ ಅಭ್ಯರ್ಥಿಗಳನ್ನು ರೆಸಾರ್ಟ್‌ನಲ್ಲಿ ಇಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ರೆಸಾರ್ಟ್‌ನಲ್ಲಿ ಇಡಲಾಗಿದೆ.
ಇನ್ನು ಫಲಿತಾಂಶ ನಂತರದ ತುರ್ತು ಚಟುವಟಿಕೆ ದೃಷ್ಟಿಯಿಂದ ಕಾಂಗ್ರೆಸ್ ಈಗಾಗಲೇ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದೆ ಎಂದು ವರದಿಯಾಗಿದೆ. 2017ರಲ್ಲಿ ನಡೆದ ಶಾಸಕರ ಪಕ್ಷಾಂತರ ಆತಂಕದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನೆಲ್ಲ ಅಭ್ಯರ್ಥಿಗಳನ್ನು ಪಣಜಿ ಬಳಿಯ ಬಂಬೋಲಿಮ್ ವಿಲೇಜ್‌ನ ಐಷಾರಾಮಿ ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ. ಹಿರಿಯ ಕಾಂಗ್ರೆಸ್ ನಾಯಕರಿಗೆ ಉಸ್ತುವಾರಿ ನೀಡಲಾಗಿದೆ.
ಗೋವಾ ಕಾಂಗ್ರೆಸ್ ನಾಯಕರು ತೃಣಮೂಲ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದು, ಸರ್ಕಾರ ರಚಿಸುವ ಸಂದರ್ಭದಲ್ಲಿ ಬೆಂಬಲ ನೀಡುವಂತೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.