ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜ್ಯಪಾಲ ಥಾವರ್ ಚಂದ್
ತಿರುಪತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ತಿರುಪತಿಗೆ ಭೇಟಿ ನೀಡಿದ್ದರು. ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು, ವಿಶೇಷ ಪೂಜೆ ಸಲ್ಲಿಸಿದರು.
ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ತಿರುಪತಿ ಜಿಲ್ಲೆಯ ಬಿಜೆಪಿ ಮುಖಂಡರಾದ ಭಾನುಪ್ರಕಾಶ್ ರೆಡ್ಡಿ, ಅಧಿಕಾರಿಗಳು ಉಪಸ್ಥಿತರಿದ್ದರು.