75 ಸಾವಿರ ಯುವಜನರಿಗೆ ನೇಮಕಾತಿ ಪತ್ರ ವಿತರಿಸುವ ಯೋಜನೆಗೆ ಪ್ರಧಾನಿ ಚಾಲನೆ
ನವದೆಹಲಿ; ಹತ್ತು ಲಕ್ಷ ಮಂದಿ ನೇಮಕಾತಿ ಅಭಿಯಾನ ಹಮ್ಮಿಕೊಂಡಿರುವ ಕೇಂದ್ರ ಸರ್ಕಾರ ಇಂದು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ರೋಜ್‌ಗಾರ್ ಎಂಬ ಬೃಹತ್ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಭಾರತ ದೇಶ ಇಂದು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಪ್ರಗತಿ ಸಾಧಿಸಿದೆ. ನಮ್ಮ ಸರ್ಕಾರ 8 ವರ್ಷಗಳಲ್ಲಿ ಮಾಡಿದ ಸುಧಾರಣೆಗಳಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ನಮ್ಮ ಆಡಳಿತದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ದಕ್ಷತೆ ಹೆಚ್ಚಾಗಿದೆ. ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪದೊಂದಿಗೆ ನಾನು ಮುನ್ನಡೆಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.