National

ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಮೊತ್ತ 3,528 ಕೋಟಿ ರೂಪಾಯಿ..!

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿರುವ ಜಿಎಸ್‌ಟಿ ಬಾಕಿ ಮೊತ್ತ 3,528ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಕೇಂದ್ರ ಕೊಡಬೇಕಿರುವ ಜಿಎಸ್‌ಟಿ ಬಾಕಿ ಮೊತ್ತದಲ್ಲಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ಕರ್ನಾಟಕ ಐದನೇ ಸ್ಥಾನದಲ್ಲಿದೆ.


ಸೆಪ್ಟೆಂಬರ್‌ ತಿಂಗಳ ಅಂತ್ಯದವರೆಗಿನ ಮಾಹಿತಿಯ ಪ್ರಕಾರ, ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರದ ಬಾಕಿ ಮೊತ್ತ ಒಟ್ಟು 51,798 ಕೋಟಿ ರೂಪಾಯಿಗಳೆಂದು ತಿಳಿದುಬಂದಿದೆ. ಈ ಮೊತ್ತವನ್ನು ನವೆಂಬರ್‌ 24ರಂದು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. 2020–21ರಲ್ಲಿ 1.10 ಲಕ್ಷ ಕೋಟಿ ಹಾಗೂ 2021–22ರಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

Share Post