ಜ್ಞಾನವಾಪಿ ಮಸೀದಿ ವಿವಾದ: ನಾಳೆಗೆ ತೀರ್ಪು ಕಾಯ್ದಿರಿಸಿದ ವಾರಾಣಸಿ ಕೋರ್ಟ್
ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ, ಮಸೀದಿ ಸರ್ವೇ ಕಾರ್ಯ ನಿಲ್ಲಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ವಾರಾಣಸಿ ವಿಚಾರಣೆ ಮುಕ್ತಾಯಗೊಳಿಸಿದೆ. ಆದ್ರೆ ತೀರ್ಪು ಕಾಯ್ದಿರಿಸಿದೆ. ನಾಳೆಯೇ ತೀರ್ಪು ನೀಡುವ ಸಾಧ್ಯತೆ ಇದೆ.
ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಪರರು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಮುಸ್ಲಿಂ ಸಂಘಟನೆ, ಮಸೀದಿ ಪರವಾಗಿ ಶಿವಲಿಂಗ ಪತ್ತೆಯಾದ ಜಾಗವನ್ನು ನಿರ್ಬಂಧಿಸಿದ್ದರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಇಂದು ಕೋರ್ಟ್ನಲ್ಲಿ ವಾದ – ಪ್ರತಿವಾದ ನಡೆಯಿತು.