ಹರಿಯಾಣದಲ್ಲಿ ಭೂಕುಸಿತ:ಭರದಿಂದ ಸಾಗಿದ ರಕ್ಷಣಾಕಾರ್ಯ
ಹರಿಯಾಣ: ಗಣಿಗಾರಿಕೆ ಸ್ತಲದಲ್ಲು ಭೂಕುಸಿತವುಂಟಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹರಿಯಾಣದ ಭಿವಾನಿ ಜಿಲ್ಲೆಯ ದಡಮ್ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ತೋಷಮ್ ಬ್ಲಾಕ್ನಲ್ಲಿ ಉಂಟಾಗಿರುವ ಭೂಕುಸಿತದಲ್ಲಿ 6ಕ್ಕೂ ಹೆಚ್ಚು ಡಂಪರ್ ಟ್ರಕ್ ಹಾಗೂ ಕಾಮಗಾರಿ ಯಂತ್ರಗಳು ಹೂತು ಹೋಗಿರುವುದಾಗಿ ತೋಷಮ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಖ್ಬೀರ್ ತಿಳಿಸಿದ್ದಾರೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷನಾ ಕಾರ್ಯ ಭರದಿಂದ ಸಾಗಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಇನ್ನೂ ಮೃತಪಟ್ಟ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ಸ್ಥಳಕ್ಕೆ ಸಚಿವ ಜೆ.ಪಿ. ದಲಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವೈದ್ಯರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
Saddened by the unfortunate landslide accident in Dadam mining zone at Bhiwani. I am in constant touch with the local administration to ensure swift rescue operations and immediate assistance to the injured.
— Manohar Lal (@mlkhattar) January 1, 2022