National

ಕೇರಳದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್.ಡಿ.ಕೆ ಪೂಜೆ ಸಲ್ಲಿಕೆ

ಕಣ್ಣೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆದ ಹೆಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿನ ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿಗಳು, ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು.

ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ನಮ್ಮ ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶ್ರೀ ರಾಜರಾಜೇಶ್ವರ ಸ್ವಾಮಿ ಅವರಿಗೆ ಪೂಜೆ ಸಲ್ಲಿಸಿದ್ದರು ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರ್ಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಬಂಡೆಪ್ಪ ಖಾಷೆಂಪೂರ್ ಸಾಥ್‌ ನೀಡಿದ್ರು.  ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಇತರೆ ಸದಸ್ಯರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.

ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ಸುವಿಶಾಲವಾದ ದೇವಳಕ್ಕೆ ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Share Post