National

ಗುಜರಾತ್‌ನಲ್ಲೂ ಮಳೆಯ ಅಬ್ಬರ; ಹತ್ತು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಗಾಂಧಿನಗರ; ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿವೆ. ಪೂರ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳು ಕುಸಿದುಬಿದ್ದಿವೆ.

ಮುಂದಿನ 24 ಗಂಟೆಗಳಲ್ಲಿ ಗುಜರಾತ್‌ನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸೂರತ್‌, ಜುನಾಗಡ್‌, ಭಾವ್‌ನಗರ್‌. ವಲ್ಸದ್‌, ನವಸಾರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Share Post