HIJAB CASE: ಆಂಧ್ರದ ವಿಶಾಖಪಟ್ಟಣಂನಲ್ಲಿ ಪ್ರತಿಭಟನೆ
ವಿಶಾಖಪಟ್ಟಣಂ: ಹಿಜಾಬ್ ವಿವಾದ ಆಂಧ್ರಪ್ರದೇಶಕ್ಕೂ ಕಾಲಿಟ್ಟಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅವಕಾಶ ನೀಡಬೇಕೆಂದು ಒತ್ತಾಯಿಸಿ ಆಂಧ್ರ ಪ್ರದೇಶದ ವಿಶಾಖ ಪಟ್ಟಣಂನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘಟನೆಗಳು ಹಿಜಾಬ್ ಅನ್ನು ಸಂವಿಧಾನದ ಹಕ್ಕು ಎಂದು ಬೆಂಬಲಿಸಿ ಪ್ರತಿಭಟನೆ ನಡೆಸಿದರು.
ಪೋಸ್ಟರ್‌ಗಳನ್ನು ಹಿಡಿದು ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕರ್ನಾಟಕದಲ್ಲಿ ಹಿಜಾಬ್ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದರು. ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಅದನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಾರದೆಂದು ಪ್ರತಿಭಟನಾಕಾರರು ಮನವಿ ಮಾಡಿದರು.