ನವೆಂಬರ್ 12ಕ್ಕೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ
ನವದೆಹಲಿ; ನವೆಂಬರ್ 12ರಂದು ಒಂದೇ ಹಂತದಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ. ಇಂದು ಕೇಂದ್ರ ಚುನಾವಣಾ ಚುನಾವಣಾ ಹಿಮಾಚಲ ಪ್ರದೇಶ ಚುನಾವಣೆಗೆ ದಿನಾಂಕ ಪ್ರಕಟಿಸಿದೆ.
ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಕ್ಷೇತ್ರಗಳಿವೆ. ಎಲ್ಲಾ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ. ಯಾವುದೇ ಅಡಚಣೆ ಇಲ್ಲದೆ ಚುನಾವಣೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಈಗಾಗಲೇ ಸಮಾಲೋಚನೆ ಮಾಡಿದ್ದೇವೆ ಎಂದು ಕೇಂದ್ರ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇವತ್ತು ಗುಜರಾತ್ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗುತ್ತೆ ಎಂದು ಹೇಳಲಾಗಿತ್ತು. ಆದ್ರೆ ಆಯುಕ್ತರು ಗುಜರಾತ್ ದಿನಾಂಕವನ್ನು ನಂತರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.