ಮೋದಿ ಆಡಳಿತದಲ್ಲಿ ರಾಷ್ಟ್ರೀಯ ಭದ್ರತೆ ದುರ್ಬಲವಾಗಿದೆ; ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎಂಟು ವರ್ಷಗಳ ಆಡಳಿತದ ಅವಧಿಯಲ್ಲಿ ರಾಷ್ಟ್ರೀಯ ಭದ್ರತೆ ಭಾರಿ ದುರ್ಬಲವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚೀನಾದ ಬಗ್ಗೆ ಮೋದಿ ಅವರಿಗೆ ಅರ್ಥ ಮಾಡಿಕೊಳ್ಳಲೂ ಆಗಿಲ್ಲ ಎಂದಿದ್ದಾರೆ.
ಎಂಟು ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸುವಲ್ಲಿ ಬಹುತೇಕ ವಿಫಲರಾಗಿದ್ದಾರೆ. ಜೊತೆಗೆ 2016ರಿಂದ ದೇಶದ ವಾರ್ಷಿಕ ಅಭಿವೃದ್ಧಿ ದರ ಕೂಡಾ ಕುಸಿಯುತ್ತಾ ಬಂದಿದೆ. ಇದರ ಜೊತೆಜೊತೆಗೆ ರಾಷ್ಟ್ರೀಯ ಭದ್ರತೆಯೂ ಭಾರಿ ದುರ್ಬಲಗೊಂಡಿದೆ. ಚೀನಾವನ್ನು ಅರ್ಥ ಮಾಡಿಕೊಳ್ಳಲು ಮೋದಿಗೆ ಆಗಿಲ್ಲ. ಈ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಈಗಲೂ ಅವಕಾಶವಿದೆ. ಆದರೆ ಅದು ಹೇಗೆ ಎಂದು ಅವರಿಗೆ ಗೊತ್ತಿದೆಯೇ? ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.