INDIA ಒಕ್ಕೂಟ ಮಮತಾ ಬ್ಯಾನರ್ಜಿ ಶಾಕ್; ಏಕಾಂಗಿ ಸ್ಪರ್ಧೆ ಎಂದ ಪಶ್ಚಿಮ ಬಂಗಾಳ ಸಿಎಂ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಅವರು INDIA ಒಕ್ಕೂಟಕ್ಕೆ ಶಾಕ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸೀಟು ಹೊಂದಾಣಿಕೆ ಬಗ್ಗೆ ನಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಯಾತ್ರೆ ಮಾಡುತ್ತಿದ್ದಾರೆ. ಅವರು ಕನಿಷ್ಠ ದೀದಿ ನಾನು ನಿಮ್ಮ ರಾಜ್ಯಕ್ಕೆ ಬರುತ್ತಿದ್ದೇವೆ ಅಂತ ನನ್ನ ಜೊತೆ ಮಾತನಾಡಬೇಕಿತ್ತು. ನನಗೆ ಅವರೇನೂ ಹೇಳಲಿಲ್ಲ. ನಾವು ಇಂಡಿಯಾ ಒಕ್ಕೂಟದ ಭಾಗವಾಗಿದ್ದೇವೆ. ಆದರೂ ಕೂಡಾ ಪಶ್ಚಿಮ ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ನಿರ್ಣಯ ಮಾಡಿದ್ದೇವೆ. ಚುನಾವಣೆ ಫಲಿತಾಂಶದ ನಂತರ ಏನು ಮಾಡಬೇಕು ಅನ್ನೋದನ್ನು ತೀರ್ಮಾನ ಮಾಡುತ್ತೇವೆ. ನಮ್ಮದು ಜಾತ್ಯತೀತ ಪಾರ್ಟಿ. ನಮಗೆ ಬಿಜೆಪಿ ಎದುರಿಸುವ ಶಕ್ತಿ ಇದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದಾರೆ.
ಪಶ್ಚಿಮ ಬಂಗಾಳ 42 ಲೋಕಸಭಾ ಸ್ಥಾನಗಳನ್ನು ಹೊಂದಿದೆ. 2019 ರ ಚುನಾವಣೆಯಲ್ಲಿ ಟಿಎಂಸಿ 22 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 18 ಸ್ಥಾನಗಳನ್ನು ಗೆದ್ದಿದೆ.