CrimeNational

ಲಾರಿಗೆ ಇನ್ನೋವಾ ಕಾರು ಡಿಕ್ಕಿ!; 7 ಮಂದಿ ದುರ್ಮರಣ!

ಗುಜರಾತ್‌; ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಅತಿವೇಗವಾಗಿಬಂದ ಇನ್ನೋವಾ ಕಾರೊಂದು ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.. ಇದರ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ಗುಜರಾತ್‌ನ ಸಬರ್‌ಕಾಂತ್‌ ಜಿಲ್ಲೆ ಹಿಮ್ಮತ್​ ನಗರದ ಸಹಕಾರಿ ಗಿರಣಿ ಬಳಿ ಈ ಅಪಘಾತ ಸಂಭವಿಸಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ದುರಂತ ನಡೆದಿದೆ.. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.. ಕಾರಿನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು.. ಇದರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ.. ಆದ್ರೆ ಅವರೂ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ..
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳು ಕಾರಿನಲ್ಲೇ ಸಿಲುಕಿಕೊಂಡಿದ್ದವು.. ಅದನ್ನು ತೆಗೆಯಲೂ ಸಹಾ ಆಗುತ್ತಿರಲಿಲ್ಲ.. ಹೀಗಾಗಿ ಕಟರ್‌ ಬಳಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಾರಿನಲ್ಲಿದ್ದವರು ಶಾಮಲಾಜಿಯಿಂದ ಅಹಮದಾಬಾದ್​​ಗೆ ಹಿಂತಿರುಗುತ್ತಿದ್ದ ಎಂದು ತಿಳಿದುಬಂದಿದೆ..

Share Post