ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ನಿಧನ: ಗಣ್ಯರ ಸಂತಾಪ
ಕೋಲಾರ: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜಾಲಪ್ಪನವರಿಗೆ ಅವರದ್ದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಆದ್ತೆ ಚಿಕಿತ್ಸೆಗೆ ಸ್ಪಂದಿಸದೆ ಜಾಲಪ್ಪನವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ರು. ನಾಲ್ಕು ಬಾರಿ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಕ್ಟೋಬರ್ 19, 1925ರಂದು ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಜನಿಸಿದ್ರು. 1980-83ರಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ರಾಜಕೀಯ ಪ್ರವೇಶ ಪಡೆದ ನಂತರ ಸಹಕಾರ, ಗೃಹ ಮಂತ್ರಿ, ಕಂದಾಯ ಸಚಿವ, ಜವಳಿ ಉದ್ಯಮ ಖಾತೆಯನ್ನು ನಿರ್ವಹಿಸಿದ್ರು. ಲೋಕಸಭೆಗೆ ನಾಲ್ಕು ಬಾರಿ ಚುನಾಯಿತರಾಗಿದ್ರು. ಶ್ವಾಸಕೋಶ ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಜಾಲಪ್ಪನವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.