National

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ; ಒಂಭತ್ತು ಮಂದಿ ದುರ್ಮರಣ

ಶ್ರೀನಗರ; ಜಮ್ಮು–ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್‌ವೊಂದು ಕಂದಕಕ್ಕೆ ಉರುಳಿ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಸೇನಾ ಸಿಬ್ಬಂದಿ ಸೇರಿ ಒಂಬತ್ತು ಜನರು ಮೃತಪಟ್ಟಿದ್ದಾರೆ. ಕಾರ್ಗಿಲ್‌ನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಕ್ಯಾಬ್, ಝೋಜಿಲಾದಲ್ಲಿ ಉರುಳಿ ಆಳವಾದ ಕಂದಕಕ್ಕೆ ಬಿದ್ದಿದೆ. ಪೊಲೀಸರು, ಸೇನೆ ಮತ್ತು ಸ್ಥಳೀಯರು ಜೊತೆಯಾಗಿ ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಐವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

Share Post