ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಪತನ ; ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ; ಬಿಹಾರದಲ್ಲಿ ನಿರೀಕ್ಷೆಯಂತೆ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಪತನವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ, ಜೆಡಿಯು ಮೈತ್ರಿ ಮುರಿದುಬಿದ್ದಂತಾಗಿದೆ.
ಇಂದು ಜೆಡಿಯು ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುರಿದುಕೊಳ್ಳಲು ತೀರ್ಮಾನಿಸಲಾಗಿತ್ತು. ಅನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ಆರ್‌ಜೆಡಿ ನಾಯಕರಲ್ಲಿ ಒಬ್ಬರಾದ ತೇಜಸ್ವಿ ಯಾದವ್ ಇದ್ದರೆಂಬುದು ವಿಶೇಷ.
ಆರ್‌ಜೆಡಿ,ಕಾಂಗ್ರೆಸ್‌ಹಾಗೂಜೆಡಿಯು ಸೇರಿ ಹೊಸ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಈಗಾಗಲೇ ಆರ್‌ಜೆಡಿ ನಾಯಕರು ಜೆಡಿಯುಗೆ ಬಂಬಲ ನೀಡಲು ತೀರ್ಮಾನಿಸಿದ್ದಾರೆ. ಅಂದುಕೊಂಡಂತೆ ಆದರೆ ಮತ್ತೆ ನಿತೀಶ್ ಕುಮಾರ್ ಸಿಎಂ ಆಗಲಿದ್ದು, ಆರ್‌ಜೆಡಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ.