National

ಗುಂಡು ಹಾರಿಸಿ ಬಿಜೆಪಿ ಮುಖಂಡನ ಹತ್ಯೆ

ರಾಂಚಿ: ಮನೆಯಲ್ಲಿ ನಿದ್ದೆ ಮಾಡುತ್ತಿದ್ದ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನ ಲೋಹದರ್ಗಾ ಜಿಲ್ಲೆಯಲ್ಲಿ ನಡೆದಿದೆ. ಚಟಕ್‌ಪುರ ಗ್ರಾಮದಲ್ಲಿ ಇಂದು ಮುಂಜಾನೆ ಈ ಕೃತ್ಯ ಎಸಗಲಾಗಿದ್ದು, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರತನ್ ಮಹತೋ ಸಾವನ್ನಪ್ಪಿದ್ದಾರೆ.

ಗುಂಡು ಹಾರಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದ್ರೆ, ಆಸ್ಪತ್ರೆ ತಲುಪುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 

Share Post