ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ
ನವದೆಹಲಿ; ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಂದ್ರಚೂಡ್ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.
49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು.ಲಲಿತ್ ನವೆಂಬರ್ 8ಕ್ಕೆ ತಮ್ಮ ಕರ್ತವ್ಯವನ್ನು ಮುಕ್ತಾಗೊಳಿಸಿದರು. ಈ ಹಿನ್ನೆಲೆಯಲ್ಲಿ ಇಂದು 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ನೇಮಕವಾಗಿದ್ದಾರೆ.