National

ಕಾನ್ಪುರ ಘರ್ಷಣೆ; ಸಾವಿರ ಮಂದಿ ವಿರುದ್ಧ ಕೇಸ್‌, 18 ಮಂದಿ ಅರೆಸ್ಟ್‌

ಲಕ್ನೋ; ಕಾನ್ಪುರದಲ್ಲಿ ನಿನ್ನೆ ನಡೆದ ಘರ್ಷಣೆ ಸಂಬಂಧ ಸಾವಿರ ಮಂದಿ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಇನ್ನು ಈಗಾಗಲೇ 18 ಮಂದಿಯನ್ನು ಬಂಧಿಸಲಾಗಿದ್ದು, ಕಾನ್ಪುರದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ನಿನ್ನೆ ಮುಸ್ಲಿಂ ಸಮುದಾಯದ ಗುಂಪೊಂದು ಕಾನ್ಪುರದ ಪ್ರಸಿದ್ಧ ಮಾರುಕಟ್ಟೆಯೊಂದರ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿತ್ತು. ಈ ವೇಳೆ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಲು ನಿರಾಕರಿಸಿದ ಹಿನ್ನೆಲೆ ಎರಡು ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು.

ಬಂದ್‍ಗೆ ಬೆಂಬಲ ನೀಡಲು ನಿರಾಕರಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆಯುಂಟಾಗಿದ್ದು, ಕಲ್ಲು ತೂರಾಟ ನಡೆಸಲಾಯಿತು. ಕಚ್ಚಾ ಬಾಂಬ್‍ಗಳನ್ನು ಎಸೆಯಲಾಗಿದೆ. ಈ ವೇಳೆ ಕಿಡಿಗೇಡಿಗಳ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಚ್ ನಡೆಸಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
Share Post