NationalPolitics

Loksabha Elections; ಮಾರ್ಚ್‌ 9ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ..?; ಎಷ್ಟು ಹಂತದಲ್ಲಿ ಮತದಾನ..?

ನವದೆಹಲಿ; ದೇಶದಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆದಿವೆ.. 543 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇನ್ನೇ ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.. ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳು ನಡೆದಿವೆ.. ಅಂದುಕೊಂಡಂತೆ ಆದರೆ ಮಾರ್ಚ್‌ 9 ರಂದು ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್‌-ಮೇ ತಿಂಗಳಲ್ಲಿ ಮತದಾನ;

ಏಪ್ರಿಲ್‌-ಮೇ ತಿಂಗಳಲ್ಲಿ ಮತದಾನ; 18ನೇ ಲೋಕಸಭಾ ಚುನಾವಣೆ ಮೇ ಒಳಗೆ ಮುಗಿಯಬೇಕು.. ಹೀಗಾಗಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಈಗಾಗಲೇ ಹಲವಾರು ಬಾರಿ ಸಭೆಗಳನ್ನು ನಡೆಸಲಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಸೂಕ್ತ ದಿನಾಂಕಗಳ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಕೆಲವು ಮಾಹಿತಿಗಳ ಪ್ರಕಾರ ಮಾರ್ಚ್‌ 9ರಂದು ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ದಿನಾಂಕ ಪ್ರಕಟ ಮಾಡಬಹುದು ಎಂದು ಹೇಳಲಾಗುತ್ತಿದೆ. ಆದ್ರೆ, ಇನ್ನೂ ಕೂಡಾ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಒಂದೂವರೆ ತಿಂಗಳಿಗೆ ಮೊದಲ ಹಂತದ ಮತದಾನ;

ಒಂದೂವರೆ ತಿಂಗಳಿಗೆ ಮೊದಲ ಹಂತದ ಮತದಾನ; ಚುನಾವಣೆ ದಿನಾಂಕ ಘೋಷಣೆಯಾದ ಮೇಲೆ ಒಂದೂವರೆ ತಿಂಗಳಿಗೆ ಅಂದರೆ 45 ದಿನಗಳಿಗೆ ಮೊದಲ ಹಂತದ ಮತದಾನ ನಡೆಯುವ ಸಾಧ್ಯತೆ ಇದೆ. ಅನಂತರ ಒಂದು ತಿಂಗಳ ಒಳಗಾಗಿ ಎಲ್ಲಾ ಹಂತದ ಮತದಾನಗಳೂ ನಡೆಯುವ ಸಾಧ್ಯತೆ ಇದೆ. ಕಳೆದ ಬಾರಿ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಈ ಬಾರಿಯೂ ಕೂಡಾ ಏಳು ಹಂತಗಳಲ್ಲಿಯೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಚುನಾವಣೆಗಳು ನಡೆಯುವುದರಿಂದ ಭದ್ರತೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ, ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ.

ಆಂಧ್ರ, ಒಡಿಶಾ ವಿಧಾನಸಭೆಗೂ ಚುನಾವಣೆ;

ಆಂಧ್ರ, ಒಡಿಶಾ ವಿಧಾನಸಭೆಗೂ ಚುನಾವಣೆ; ಲೋಕಸಭಾ ಚುನಾವಣೆ ಜೊತೆ ಜೊತೆಗೇ ಆಂಧ್ರ, ಒಡಿಶಾ ರಾಜ್ಯ ವಿಧಾನಸಭೆಗಳ ಚುನಾವಣೆಯೂ ನಡೆಯುತ್ತದೆ. ಹೀಗಾಗಿ ಇಲ್ಲಿ ವಿಶೇಷ ಭದ್ರತೆ ಹಾಗೂ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಒಂದೇ ಬಾರಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವುದರಿಂದ ಚುನಾವಣಾ ಅಕ್ರಮಗಳು ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಅಧಿಕಾರಿಗಳು ಹೆಚ್ಚಿನ ಗಮನ ನೆಟ್ಟಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಆಂಧ್ರಪ್ರದೇಶ, ಒಡಿಶಾ, ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.

ಜಮ್ಮು-ಕಾಶ್ಮೀರ ಭದ್ರತೆಗೆ ಹೆಚ್ಚು ಒತ್ತು;

ಜಮ್ಮು-ಕಾಶ್ಮೀರ ಭದ್ರತೆಗೆ ಹೆಚ್ಚು ಒತ್ತು; ಜಮ್ಮು-ಕಾಶ್ಮೀರದಲ್ಲಿ ಈ ಬಾರಿ ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಈಗಾಗೇ ಹಲವು ಸುತ್ತಿನ ಸಭೆಗಳು ನಡೆದಿವೆ.. ಇನ್ನು ಮಾರ್ಚ್ 8, 9 ರಂದು ಚುನಾವಣಾ ಆಯೋಗದ ಅಧಿಕಾರಿಗಳು ಜಮ್ಮು ಕಾಶ್ಮೀರದ ಭದ್ರತೆ, ಪೊಲೀಸ್ ಪಡೆಗಳ ಲಭ್ಯತೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಾರ್ಚ್ 12, 13 ರಂದು ಚುನಾವಣಾ ಆಯೋಗದ ಅಧಿಕಾರಿಗಳು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಸಭೆಗಳನ್ನು ಮಾಡಲಿದ್ದಾರೆ.

ಕಳೆದ ಬಾರಿ ಯಾವಾಗ ಚುನಾವಣೆ ನಡೆದಿತ್ತು..?;

ಕಳೆದ ಬಾರಿ ಯಾವಾಗ ಚುನಾವಣೆ ನಡೆದಿತ್ತು..?; 2019ರ ಮಾರ್ಚ್ 10ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿತ್ತು. 2019ರ ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳಲ್ಲಿ ಮತದಾನ ನಡೆದಿತ್ತು. 2019ರ ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡನೇ ಬಾರಿ ಅಧಿಕಾರಕ್ಕೇರಿತ್ತು. ಈ ಬಾರಿಯೂ 2019ರಂತೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಕ್ರಿಯೆಗಳು ನಡೆಸುವ ಸಾಧ್ಯತೆ ಇದೆ.

Share Post