National

ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಅಪಘಾತ; ಹಳಿ ತಪ್ಪಿದ ಬೋಗಿಗಳು

ನಾಸಿಕ್​: ಮಹಾರಾಷ್ಟ್ರದ ನಾಸಿಕ್‌ ಬಳಿ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಲಹವಿತ್‌ ಮತ್ತು ದೇವಲಾಲಿ ಮಧ್ಯೆ ಈ ದುರ್ಘಟನೆ ಸಂಭವಿಸಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ. 

    ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿ ತಪ್ಪಿದ್ದರಿಂದ ಈ ದರ್ಘಟನೆ ನಡೆದಿದೆ. ಈ ಕಾರಣದಿಂದಾಗಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ರೈಲುಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಯಿತು. ಇನ್ನು ಸ್ಥಳಕ್ಕೆ ರಕ್ಷಣಾ ತಂಡಗಳು ಹಾಗೂ ರೈಲ್ವೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಲಾಯಿತು.

Share Post