CrimeNational

ಮಹಾರಾಷ್ಟ್ರದಲ್ಲಿ ನಾಲ್ವರು ಪಿಎಫ್‌ಐ ಸದಸ್ಯರ ಬಂಧನ; ತೀವ್ರ ವಿಚಾರಣೆ

ಮುಂಬೈ; ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಈ ನಡುವೆ ಪಿಎಫ್‌ಐ ಸಂಘಟನೆಯ ಕಚೇರಿಗಳು, ಮುಖಂಡರ ಮನೆಗಳ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಇವತ್ತು ಕೂಡಾ ಮಹಾರಾಷ್ಟ್ರದಲ್ಲಿ ನಾಲ್ವರು ಪಿಎಫ್‌ಐ ಮುಖಂಡರನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ರಾಯಗಢ ಜಿಲ್ಲೆಯ ಪನ್ವೇಲ್‌ನಲ್ಲಿ ನಾಲ್ವರು ಪಿಎಫ್‌ಐ ಸದಸ್ಯರನ್ನು ಬಂಧಿಸಿ, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ನಿಷೇಧಿತ ಪಿಎಫ್‌ಐ ಸಂಘಟನೆಯ ಸ್ಥಳೀಯ ಘಟಕದ ಕಾರ್ಯದರ್ಶಿ, ರಾಜ್ಯ ವಿಸ್ತರಣಾ ಸಮಿತಿಯ ಸದಸ್ಯರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪಿಎಫ್‌ಐ ಸಂಘಟನೆಗೆ ನಿಷೇಧ ಹೇರಿದ್ದರೂ ಎಲ್ಲರೂ ಸಭೆ ಸೇರಿದ್ದರು. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Share Post