ಶಾಸಕರ ಕುಟುಂಬದ ಭದ್ರತೆ ಹಿಂಪಡೆದಿದ್ದಕ್ಕೆ ಏಕನಾತ್ ಶಿಂಧೆ ಆಕ್ರೋಶ
ಮುಂಬೈ; ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಗುವಾಹಟಿಯಲ್ಲಿರುವ ಶಾಸಕರ ಕುಟಂಬದ ಭದ್ರತೆಯನ್ನು ಹಿಂಪಡೆದಿದೆ ಎಂದು ಶಾಸಕ ಏಕನಾಥ್ ಶಿಂಧೆ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಜನೀಶ್ ಸೇಠ್ ಮತ್ತು ಎಲ್ಲಾ ಪೊಲೀಸ್ ಕಮಿಷನರ್‌ಗಳಿಗೆ ಬರೆದ ಪತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತಾ ರಕ್ಷಣೆಯನ್ನು ದುರುದ್ದೇಶಪೂರ್ವಕವಾಗಿ ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.