ಭ್ರಷ್ಟಾಚಾರ ಆರೋಪ ಪ್ರಕರಣ; ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶಮುಖ್
ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬಂಧಿಸಲಾಗಿದೆ. ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದೇಶಮುಖ್ ಅವರನ್ನು ಬಂಧಿಸಿದ್ದಾರೆ.
2021ರ ನವೆಂಬರ್‌ನಲ್ಲಿ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು. ಆದರೆ ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ವೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಳಿಕ, ಅವರನ್ನು ಗೃಹಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಕಳೆದ ವರ್ಷದ ನವೆಂಬರ್ 1ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಅವರನ್ನು ಬಂಧಿಸಿತ್ತು.