ಹಿಮಾಚಲದಲ್ಲಿ ಭೀಕರ ರಸ್ತೆ ಅಪಘಾತ; 40ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ
ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-21 ಚಂಡೀಗಢ-ಮನಾಲಿಯಲ್ಲಿ ಸಾರಿಗೆ ಬಸ್ ತಡೆಗೋಡೆಗೆ ಗುದ್ದಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಪ್ರಯಾಣಿಸುತ್ತಿದ್ದ 40 ಮಂದಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಶಿಮ್ಲಾ ಡಿಪೋದ ಬಸ್ ಮನಾಲಿಯಿಂದ ಶಿಮ್ಲಾಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ದಯೋಡ್ ಬಳಿ ಇದ್ದಕ್ಕಿದ್ದಂತೆ ಬಸ್ ಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನಲ್ಲಿದ್ದ 40 ಮಂದಿ ಗಾಯಗೊಂಡಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಪೊಲೀಸರು, ಆಡಳಿತ ಮಂಡಳಿ ಹಾಗೂ 108 ಸಿಬ್ಬಂದಿ ಸ್ಥಳದಲ್ಲಿದ್ದು, ಗಾಯಾಳುಗಳನ್ನು ಮಂಡಿ ವಲಯ ಆಸ್ಪತ್ರೆಗೆ ರವಾನಿಸಿದ್ದಾರೆ.