ರಮೇಶ್ ಕುಮಾರ್ ಹೇಳಿಕೆಗೆ ಮಲ್ಲಿಕಾರ್ಜುನ್ ಖರ್ಗೆ ಪ್ರತಿಕ್ರಿಯೆ
ದೆಹಲಿ: ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕುರಿತು ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಆರ್. ರಮೇಶ್ ಹೀಗೆ ಮಾತನಾಡಬಾರದಿತ್ತು. ಅವರೊಬ್ಬರು ಅನುಭವಿ ರಾಜಕಾರಣಿ, ೨ ಬಾರಿ ಸ್ಪೀಕರ್ ಆಗಿದ್ದರು. ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.ಹೀಗಾಗಿ ಈ ವಿಚಾರವನ್ನು ಇಲ್ಲಿಗೆ ಬಿಡುವುದು ಸೂಕ್ತವೆಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.