NationalPolitics

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ನವದೆಹಲಿ; ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಖರ್ಗೆಯವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಒಬ್ಬರಿಗೆ ಒಂದೇ ಹುದ್ದೆ ನಿಯಮದ ಅನ್ವಯ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪ್ರತಿಯನ್ನು ಸೋನಿಯಾ ಗಾಂಧಿಯವರಿಗೆ ಕಳುಹಿಸಲಾಗಿದೆ ಎಂದು ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಅಭ್ಯರ್ಥಿಯಾಗಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಶಶಿ ತರೂರ್ ಮತ್ತು ಕೆ.ಎನ್‌.ತ್ರಿಪಾಠಿ ಪ್ರತಿಸ್ಪರ್ಧಿಗಳಾಗಿದ್ದಾರೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

Share Post