National

ಕೇರಳದ ಸಿಪಿಐಎಂ ಕಚೇರಿ ಬಳಿ ಬಾಂಬ್‌ ಸ್ಫೋಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತಿರುವನಂತಪುರಂ;  ಕೇಳರದ ಸಿಪಿಐಎಂ ರಾಜ್ಯ ಕಚೇರಿ ಬಳಿ ಬಾಂಬ್‌ ಸ್ಫೋಟಿಸಲಾಗಿದೆ. ವ್ಯಕ್ತಿಯೊಬ್ಬ ಸಿಪಿಐಎಂ ಕಚೇರಿ ಮುಂದೆ ಬಾಂಬ್‌ ಎಸೆದು ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೇರಳದಲ್ಲಿ ಸಿಪಿಐಎಂ ಪಕ್ಷವೇ ಆಡಳಿತದಲ್ಲಿದೆ. ಈ ಪಕ್ಷದ ಕಚೇರಿಯ ಮುಖ್ಯ ಗೇಟ್‌ ಮುಂದೆ ಬಾಂಬ್‌ ಸ್ಫೋಟಗೊಂಡಿದೆ. ಬಾಂಬ್‌ ಸ್ಫೋಟಗೊಳ್ಳುತ್ತಿದ್ದಂತೆ ಪಕ್ಷದ ಹಿರಿಯ ನಾಯಕರು ಕಚೇರಿ ಬಳಿ ಧಾವಿಸಿದರು. ದಾಳಿಯ ವೇಳೆ ಹಲವು ಸಿಪಿಐ(ಎಂ) ಮುಖಂಡರು ಪಕ್ಷದ ಕಚೇರಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್‌ ಎಸೆದು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ವರದಿಯನ್ನು ಸಲ್ಲಿಸುವ ಸಮಯದಲ್ಲಿ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಇರಲಿಲ್ಲ. ಕೇರಳದಲ್ಲಿ ಹಿಂಸಾಚಾರವನ್ನು ಪ್ರೋತ್ಸಾಹಿಸುವ ನಾಯಕತ್ವವನ್ನು ಕಾಂಗ್ರೆಸ್ ಹೊಂದಿದೆ. ನಾವು ಪ್ರಜಾಸತ್ತಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯ ಎ.ವಿಜಯರಾಘವನ್ ಹೇಳಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ನ ಹಲವು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ರಾಜ್ಯ ಕೇಂದ್ರ ಕಚೇರಿಯ ಮೇಲೂ ದಾಳಿ ನಡೆದಿದೆ.

 

Share Post