ಮಣಿಪುರ ಪೈಶಾಚಿಕ ಕೃತ್ಯ; ಎಚ್ಚೆತ್ತ ಪೊಲೀಸರಿಂದ ಮತ್ತೆ ಮೂವರ ಅರೆಸ್ಟ್
ಮಣಿಪುರ; ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದಲ್ಲದೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಕೊನೆಗೂ ಎಚ್ಚೆತ್ತಿದ್ದಾರೆ. ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು ಇಂದು ಬೆಳಗ್ಗೆ ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ. ಇದರಿಂದಾಗಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
ಆರೋಪಿಗಳಲ್ಲಿ ಒಬ್ಬನನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು. ಆರೋಪಿಯನ್ನು ತೌಲಬ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆತನನ್ನು ಹುಯಿರೆಮ್ ಹೆರಾದಾಸ್ ಸಿಂಗ್ (32) ಎಂದು ಗುರುತಿಸಲಾಗಿದೆ. ಉಳಿದವರ ಬಗ್ಗೆ ಇನ್ನೂ ಮಾಹಿತಿ ಸಿಗಬೇಕಿದೆ.