National

ಪಶ್ಚಿಮ ಬಂಗಾಳದಲ್ಲಿ ಭಾರಿ ಅಗ್ನಿ ಅನಾಹುತ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಬಳಿಯ ರಾಜಾಪುರ ಪ್ರದೇಶದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ರಾಜಾಪುರ ಪ್ರದೇಶದಲ್ಲಿ ಕಾರ್ಖಾನೆಗಳು ಹೆಚ್ಚಿದ್ದು, ಇಲ್ಲಿನ ಥರ್ಮಾಕೋಲ್‌ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಹೊತ್ತಿ ಉರಿದಿದೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆದ್ರೆ, ಘಟನೆಯಲ್ಲಿ ಯಾವುದೇ ಸಾವುನೋವಿನ ಬಗ್ಗೆ ವರದಿಯಾಗಿಲ್ಲ. ದುರಂತದಲ್ಲಿ ಇಡೀ ಕಾರ್ಖಾನೆ ಸುಟ್ಟು ಕರಕಲಾಗಿದೆ. ಮೂರು ಅಗ್ನಿಶಾಮಕಗಳು ಆಗಮಿಸಿ, ಬೆಂಕಿಯನ್ನು ನಂದಿಸಿವೆ.

Share Post