NationalPolitics

ಮೇಕೆದಾಟು ವಿಚಾರ CWMA ಸಭೆಯಲ್ಲಿ ಪ್ರಸ್ತಾಪ; ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ; ಮೇಕೆದಾಟು ಯೋಜನೆ ಜಾರಿ  ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಸುಪ್ರೀಂ ಕೋರ್ಟ್‌ ಆದೇಶದಂತೆ ಬೆಂಗಳೂರು ನಗರಕ್ಕೆ ಕುಡಿಯುವ ನೀರಿಗಾಗಿ 24 ಟಿಎಂಸಿ ನೀರು ಮೀಸಲಿಟ್ಟಿದ್ದೇವೆ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಕಾವೇರಿ ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್‌ನ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದರು.

Share Post