National

ದೆಹಲಿಯಲ್ಲಿ 46 ಡಿಗ್ರಿ ಉಷ್ಣಾಂಶ ದಾಟುವ ಸಾಧ್ಯತೆ; ಹವಾಮಾನ ಇಲಾಖೆ

ನವದೆಹಲಿ: ನವದೆಹಲಿಯ ಹಲವೆಡೆ ಉಷ್ಣಾಂಶ 46 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿಯ ಹವಾಮಾನ ಪರಿವೀಕ್ಷಣಾ ಕೇಂದ್ರದಲ್ಲಿ 43.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, 12 ವರ್ಷಗಳಲ್ಲೇ ಏಪ್ರಿಲ್ ತಿಂಗಳಲ್ಲಿ ದಾಖಲಾದ ಅತ್ಯಧಿಕ ತಾಪಮಾನ ಇದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ ಈವರೆಗಿನ ಏಪ್ರಿಲ್ ತಿಂಗಳ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅದೂ ಕೂಡಾ ಏಪ್ರಿಲ್ 29, 1941ರಂದು ದಾಖಲಾಗಿತ್ತು. ತೀವ್ರ ಬಿಸಿ ಗಾಳಿ ಆತಂಕದ ಹಿನ್ನೆಲೆಯಲ್ಲಿ ದೆಹಲಿಯ ಹಲವು ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share Post