National

ಟಿಡಿಪಿ ಮುಖಂಡನಿಂದ ಲೈಂಗಿಕ ಕಿರುಕುಳ; ನಾಲ್ಕನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ವಿಜಯವಾಡ: ಟಿಡಿಪಿ ಪಾರ್ಟಿ ಮುಖಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬಾಲಕಿಯೊಬ್ಬಳು ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ.  ಟಿಡಿಪಿ ಮುಖಂಡ ವಿನೋದ್‌ ಜೈನ್‌ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬಾಲಕಿ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾಳೆ.

ಆರೋಪಿ ವಿನೋದ್‌ ಜೈನ್‌ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ ನಲ್ಲೇ ವಾಸಿಸುತ್ತಿದ್ದಾನೆ. ಈತ ಕಳೆದ ಬಾರಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಪೊರೇಟರ್‌ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ. ಸದ್ಯ ಡೆತ್‌ ನೋಟ್‌ ಆಧಾರದಲ್ಲಿ ಆರೋಪಿ ವಿನೋದ್‌ ಜೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

 

 

Share Post