National

ಕೊರೊನಾ ನಾಲ್ಕನೇ ಅಲೆ ಹಿನ್ನೆಲೆ; ನಾಳೆ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಕೊರೊನಾ ನಾಲ್ಕನೇ ಅಲೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭಿರವಾಗಿ ತೆಗೆದುಕೊಂಡಿದೆ. ನಾಲ್ಕನೇ ಅಲೆ ಕೊರೊನಾ ಹೆಚ್ಚು ಹರಡದಂತೆ ತಡೆಯಲು ಮುಂಜಾಗ್ರತೆ ವಹಿಸಲಾಗುತ್ತಿದೆ. ಈ ಕಾರಣದಿಂದ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಸಿಎಂಗಳ ವರ್ಚುಯಲ್‌ ಸಭೆ ಕರೆದಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮ್ಯಾರಥಾನ್‌ ಸಭೆಗಳನ್ನು ನಡೆಸಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳ ಸಿಎಂಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಯವರು ರಾಜ್ಯಗಳ ಸ್ಥಿತಿಗತಿ ಹಾಗೂ ರಾಜ್ಯಗಳಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಕೇಂದ್ರ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post