NationalPolitics

ಕಾಂಗ್ರೆಸ್‌ ಕುಟುಂಬ ರಾಜಕಾರಣದ ವಿರುದ್ಧ ಹರಿಹಾಯ್ದ ಪ್ರಧಾನಿ ಮೋದಿ

ದೆಹಲಿ: ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್‌ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳ ಆಯ್ಕೆ ಅವರ ಸಾಮರ್ಥ್ಯದ ಮೇಲೆ ಆಗಬೇಕು. ಕುಟುಂಬದ ಹೆಸರಿನಲ್ಲಿ ಆಗಬಾರದು ಎಂದು ಹೇಳಿದರು.

ಇತ್ತೀಚೆಗೆ ಜನರು ತಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮ ಕರ್ತವ್ಯದ ಬಗ್ಗೆ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿಯವರು, ಸಂವಿಧಾನ ಕಾರ್ಯಕ್ರಮಕ್ಕೆ ಪ್ರತಿಪಕ್ಷಗಳು ಹಾಜರಾಗದಿದ್ದುದಕ್ಕೆ ಬೇಸರ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿಲ್ಲ. ಮಹಾನ್‌ ಪುರುಷನಿಗೆ ಗೌರವ ಸೂಚಿಸುವ ಕಾರ್ಯಕ್ರಮ ಇದು. ಸಂವಿಧಾನಕ್ಕೆ ಗೌರವ ಕೊಡುವುದಕ್ಕೆ ಲೋಕಸಭಾ ಸ್ಪೀಕರ್‌ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಸ್ಪೀಕರ್‌ ಪೀಠಕ್ಕೆ ಒಂದು ಘನತೆ ಇರುತ್ತದೆ. ಈ ಘನತೆಯನ್ನು ಕಾಂಗ್ರೆಸ್‌ ಹಾಗೂ ಪ್ರತಿಪಕ್ಷಗಳು ಹಾಳು ಮಾಡಲು ಹೊರಟಿವೆ ಎಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದರು.

 

Share Post